Home ಕರಾವಳಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ: ನಾಲ್ವರ ಬಂಧನ

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ: ನಾಲ್ವರ ಬಂಧನ

ಮಂಗಳೂರು: ಬಿಜೆಪಿ ಕಾರ್ಯಕರ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಅಮ್ಮುಂಜೆಯ ನಿವಾಸಿ ಜನಾರ್ದನ ಬರಿಂಜ್ ಎಂಬವರೇ ಕೊಲೆಯಾದವರು. ಮಂಗಳೂರು ನಗರದ ನೆಹರೂ ಮೈದಾನದ ಬಳಿಯಲ್ಲಿರುವ ಪುಟ್ ಬಾಲ್ ಗ್ರೌಂಡ್ ಬಳಿ ಜನಾರ್ದನ ಅವರ ಶವ ಪತ್ತೆಯಾಗಿದೆ.


ಮಂಗಳವಾರ ಮಧ್ಯಾಹ್ನ ಮೈದಾನದ ಬಳಿಯಲ್ಲಿ ಕುಳಿತಿದ್ದ ವೇಳೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬಂದಿದೆ. ಜನಾರ್ದನ ಅವರ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಟೋ ಚಾಲಕರಾಗಿರುವ ಜನಾರ್ದನ ಬರಿಂಜ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಕ್ರೀಯ ಕಾರ್ಯಕರ್ತರಾಗಿದ್ದರು. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Join Whatsapp
Exit mobile version