ಧಾರವಾಡ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.
ಪ್ರವೀಣ್ ಕಮ್ಮಾರ ಹತ್ಯೆಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ.
ಮಂಗಳವಾರ ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಜಗಳ ನಡೆದು ದುಷ್ಕರ್ಮಿಗಳು ಪ್ರವೀಣ್ ಕಮ್ಮಾರನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ಗೆ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಗರಗ ಠಾಣೆ ಪೊಲೀಸರು ದೂರು ದಾಖಲಾಗಿದೆ.