ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ.
ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿದೆ.