ನಮ್ಮ ವಿರುದ್ಧ ಬಿಜೆಪಿಯವರು ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

Prasthutha|

ಮೈಸೂರು: ಬಿಜೆಪಿಯವರು ನಮ್ಮ ವಿರುದ್ಧ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದೆ. ಆ ಪಕ್ಷದವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

- Advertisement -


ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.


ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ ಎಂದರು.
ಮುಂಬರುವ ಲೋಕಸಭೆ ಚುನಾವಣೆ ಹಾಗೂ ರಾಜಕೀಯದ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

Join Whatsapp