ಬಿಜೆಪಿಯವರ ಮಕ್ಕಳೇ ‘ಲವ್ ಜಿಹಾದ್’ನಲ್ಲಿದ್ದಾರೆ: ಬಿಕೆ ಹರಿಪ್ರಸಾದ್‌

Prasthutha: December 21, 2021

ಬೆಳಗಾವಿ : ‘ಮತಾಂತರ ನಿಷೇಧ ಕಾಯ್ದೆ ತರಲು ಬಿಜೆಪಿಯವರು ಹೊರಟಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದಕ್ಕೆ ನಾವು ಆಸ್ಪದ ಕೊಡಲ್ಲ. ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್‌ನಲ್ಲಿದ್ದಾರೆ. ಅದಕ್ಕೆ ಅವರು ಮೊದಲು ಉತ್ತರ ಕೊಡಲಿ’ ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಕ್ರೋಶ ವ್ಯಕ್ತಡಿಸಿದರು.

‘ಮಹಾರಾಷ್ಟ್ರದ ಮಾಜಿ ಗೃಹ‌ ಸಚಿವರು ಬೆಳಗಾವಿಯಲ್ಲೇ ಎರಡು ದಿನ ಉಳಿದಿದ್ದರು. ಆದರೆ, ಇಲ್ಲಿನ ಗೃಹ ಸಚಿವರಿಗೆ ಈ ಮಾಹಿತಿಯೇ ಇಲ್ಲ. ಮಾಹಿತಿಯೇ ಇಲ್ಲವೆಂದರೆ ಹೇಗೆ? ಇದರ ಹಿಂದೆ ರಾಜಕಾರಣಿಗಳ ಷಡ್ಯಂತ್ರವಿದೆ. ಈ ಘಟನೆಯ ಸಮಗ್ರ ತನಿಖೆ ಆಗಬೇಕು’ ಎಂದೂ ಒತ್ತಾಯಿಸಿದರು.

ಎಂಇಎಸ್ ಸಂಘಟನೆಯನ್ನು ನಿಷೇಧಿಸಲೆಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಇಂಥ ವಿಚಾರಗಳಲ್ಲಿ ಪೊಲೀಸರನ್ನು ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು. ಯಾವುದೇ ಕಾರಣಕ್ಕೂ ತಪ್ಪು ಮಾಡಿದವರನ್ನು ಸುಮ್ಮನೆ ಬಿಡಬಾರದು. ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೊಳ್ಳಬೇಕು‘ ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಆಗ್ರಹಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!