ಬೆಂಗಳೂರು: ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೇ ತೆರಳಿದ್ದಕ್ಕೆ ಕಾಂಗ್ರೆಸ್ ಗೇಲಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಚಂದ್ರಯಾನ -3ರ ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿಗಳಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಭೇಟಿಯ ನಿರೀಕ್ಷೆಯಲ್ಲಿದ್ದರು. ಆದರೆ ಪ್ರಧಾನಿ ಮೋದಿಯವರು ಯಾವುದೇ ನಾಯಕರನ್ನು ಭೇಟಿಯಾಗದೆ ನೇರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕೂಡ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ತೆರಳಿದ್ದಾರೆ.
ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ.
— Karnataka Congress (@INCKarnataka) August 26, 2023
ಮೋದಿಯ ಕೋಪ ತಣ್ಣಗಾಗುವವರೆಗೆ
ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ!
ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ!@BJP4Karnataka ಅಬ್ಬೇಪಾರಿಯಾಗಿದೆ… pic.twitter.com/Gz2tJL2B7O