Home ಟಾಪ್ ಸುದ್ದಿಗಳು ಕೋವಿಡ್’ನಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೋಲು: ಜೆ.ಪಿ. ನಡ್ಡಾ

ಕೋವಿಡ್’ನಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೋಲು: ಜೆ.ಪಿ. ನಡ್ಡಾ

ಪಶ್ಚಿಮ ಬಂಗಾಳ: ಕೋವಿಡ್ ಎರಡನೇ ಅಲೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲನುಭವಿಸಬೇಕಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಕೋವಿಡ್ ನಿಂದಾಗಿ ನಮಗೆ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ವಿಫಲವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯಿಂದ ಚುನಾವಣಾ ಪ್ರಚಾರಕ್ಕೆ ಸಮಸ್ಯೆಯಾಯಿತು. ಈ ಸಂದರ್ಭ ಲಾಕ್‌ಡೌನ್ ಮತ್ತು ನಿರ್ಬಂಧಗಳನ್ನು ಹೇರಲಾಗಿತ್ತು. ಇದರಿಂದಾಗಿ ಚುನಾವಣಾ ಪ್ರಚಾರ ಕಾರ್ಯವನ್ನು ಸರಿಯಾಗಿ ನಡೆಸಲು ಸಾಧ್ಯವಾಗಿಲ್ಲ ಎಂದರು. ಬಿಜೆಪಿ ತನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ಮುಂದೊಂದು ದಿನ ಬಂಗಾಳದಲ್ಲಿ ಟಿಎಂಸಿಯನ್ನು ಸೋಲಿಸಿ, ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿದ್ದಾರೆ.

ಕಳೆದ ವರ್ಷ ಎಂಟು ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು.

Join Whatsapp
Exit mobile version