ನವದೆಹಲಿ: ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾರಾಣಸಿಯಿಂದಲೇ ಕಣಕ್ಕಿಳಿಯಲಿದ್ದಾರೆ. ಕರ್ನಾಟಕದ ಯಾವ ಅಭ್ಯರ್ಥಿಯ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ.
ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ.
28 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. 50 ವರ್ಷದೊಳಗಿನ 47 ಅಭ್ಯರ್ಥಿಗಳಿದ್ದಾರೆ . 47 ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 27 ಎಸ್ಸಿ, 18 ಎಸ್ಟಿ, 57 ಮಂದಿ ಒಬಿಸಿಗೆ ಟಿಕೆಟ್ ನೀಡಲಾಗಿದೆ ಎಂದು ವಿನೋದ್ ತಾವ್ಡೆ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕಳೆದ 10 ವರ್ಷಗಳಲ್ಲಿ ವಿವಿಧ ಸಾರ್ವಜನಿಕ ಹಿತಾಸಕ್ತಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಬಾರಿ ಸಂಕಲ್ಪ ಬಿಜೆಪಿ 370 ಮತ್ತು ಎನ್ ಡಿಎ 400 ದಾಟಬೇಕು ಎಂದು ಅವರು ಹೇಳಿದರು.