ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವುದು ಬಿಜೆಪಿಗರ ಖಯಾಲಿಯಾಗಿಬಿಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಪೋಸ್ಟನ್ನು ಟ್ವೀಟ್ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಕೊಂದ ದೇಶದ ಮೊದಲ ಭಯೋತ್ಪಾದಕ ಗೋಡ್ಸೆಯನ್ನು ಪೂಜಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವುದು ಬಿಜೆಪಿಗರ ಖಯಾಲಿಯಾಗಿ ಬಿಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಅವಮಾನ, ಬ್ರಿಟಿಷರಿಂದ ಪಿಂಚಣಿ ಪಡೆದವರಿಗೆ ಸನ್ಮಾನ ಇದೇ ಬಿಜೆಪಿಯ ನಿಲುವು ಎಂದು ಕಿಡಿಕಾರಿದೆ.