ಚುನಾವಣಾ ಬಾಂಡ್ ಗಳಿಂದಾಗಿ ಬಿಜೆಪಿಯ ಲೂಟಿ ಬಯಲಾಗಿದೆ: ಠಾಕ್ರೆ

Prasthutha|

ಮುಂಬೈ: ಚುನಾವಣಾ ಬಾಂಡ್ ಗಳಿಂದಾಗಿ ಬಿಜೆಪಿಯ ಲೂಟಿ ಬಯಲಾಗಿದೆ ಎಂದು ಶೀವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

- Advertisement -


ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ, ಬಿಜೆಪಿಯು ಚುನಾವಣಾ ಬಾಂಡ್ ಯೋಜನೆಯಿಂದಾಗಿ ₹8,000 ಕೋಟಿ ಪಡೆದುಕೊಂಡಿದೆ. ಕಾಂಗ್ರೆಸ್ ಪಡೆದ ಮೊತ್ತದೊಂದಿಗೆ ಹೋಲಿಕೆ ಮಾಡಿದರೆ ಯಾರು ಎಷ್ಟು ಲೂಟಿ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಕಿಡಿಕಾರಿದ್ದಾರೆ.


‘ವಿಕಸಿತ ಭಾರತದ ಕನಸು ತೋರಿಸುವ ಮೂಲಕ ಬಿಜೆಪಿಯು ಲೂಟಿ ಮಾಡಲು ಇನ್ನೂ ಐದು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರದಲ್ಲಿರುವುದಕ್ಕೆ ಬಯಸುತ್ತದೆ. ನೀವು (ಮತದಾರರು) ಈ ದೇಶವನ್ನು ಮತ್ತೆ ಲೂಟಿಕೋರರ ಕೈಗೆ ನೀಡುತ್ತೀರಾ’ ಎಂದು ಅವರು ಪ್ರಶ್ನಿಸಿದ್ದಾರೆ.



Join Whatsapp