‘ಒಬ್ಬನೇ ನಾಯಕ‘ ಎಂಬ ಬಿಜೆಪಿ ಚಿಂತನೆ ಅಪಮಾನಕಾರಿ: ರಾಹುಲ್ ಗಾಂಧಿ

Prasthutha|

ವಯನಾಡು: ಕೇಂದ್ರ ಬಿಜೆಪಿ ಸರ್ಕಾರವು ದೇಶದಲ್ಲಿ ‘ಒಬ್ಬನೇ ನಾಯಕ‘ ಎಂಬ ಪರಿಕಲ್ಪನೆಯನ್ನು ಹೇರುತ್ತಿದೆ, ಈ ಮೂಲಕ ದೇಶದ ಜನರನ್ನು ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕಿಡಿಕಾರಿದ್ದಾರೆ.

- Advertisement -


ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವು ಹೂವಿನ ಗುಚ್ಛದಂತೆ. ಗುಚ್ಚದ ಸೌಂದರ್ಯಕ್ಕೆ ಪ್ರತಿಯೊಂದು ಹೂವಿನ ಪಾತ್ರವಿರುತ್ತದೆ. ಹಾಗಾಗಿ, ಪ್ರತಿಯೊಂದನ್ನೂ ಗೌರವಿಸಬೇಕು. ಹೀಗಾಗಿ ಭಾರತವು ಒಬ್ಬನೇ ನಾಯಕ ಎಂಬ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಬಿಜೆಪಿಯ ಒಬ್ಬ ನಾಯಕ ಪರಿಕಲ್ಪನೆಯಿಂದಾಗಿ ಪ್ರತಿಯೊಬ್ಬ ಯುವ ಭಾರತೀಯನಿಗೆ ಅವಮಾನವಾಗಿದೆ ಎಂದು ವಾಗ್ದಾಳಿ ನಡೆಸಿದರು.



Join Whatsapp