Home ಟಾಪ್ ಸುದ್ದಿಗಳು ಲೋಕಸಭಾ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಇನ್ನಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭಾ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಇನ್ನಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲಖನೌ: ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಅವರು ಪ್ರತಿಪಾದಿಸಿದ್ದಾರೆ.


13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದ ಒಂದು ದಿನದ ನಂತರ ಅಖಿಲೇಶ್ ಯಾದವ್ ಅವರು ಈ ಹೇಳಿಕೆ ನೀಡಿದ್ದಾರೆ.


X ನಲ್ಲಿ ಪೋಸ್ಟ್ ಮಾಡಿದ ಅವರು, ಮೊದಲ ಎರಡು ಹಂತಗಳಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಯಾವುದೇ ಮತಗಳನ್ನು ಪಡೆದಿಲ್ಲ ಮತ್ತು ಉಳಿದ ಹಂತಗಳಲ್ಲಿ ಬೂತ್ ಏಜೆಂಟ್ಗಳನ್ನು ಸಹ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.


ಮೊದಲ ಎರಡು ಹಂತದ ಮತದಾನದ ನಂತರ ಮುಂದಿನ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ. ಜನ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಅಖಿಲೇಶ್ ಯಾಗವ್ ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version