ಉಡುಪಿ ನಗರಸಭೆ: ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ-ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಆಯ್ಕೆ

Prasthutha|

ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -


ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ ರಾಯಪ್ಪ ಹಾಜರಿದ್ದರು.


ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.



Join Whatsapp