Home ಟಾಪ್ ಸುದ್ದಿಗಳು ಬಿಜೆಪಿಯ ಪೂರ್ವಜರಾದ ಆರೆಸ್ಸೆಸ್ಸ್, ವಿಶ್ವ ಹಿಂದೂ ಪರಿಷತ್ತಿನ ನಾಯಕರು ಬ್ರಿಟಿಷರ ಗುಲಾಮರು: ರಾಮಲಿಂಗಾ ರೆಡ್ಡಿ

ಬಿಜೆಪಿಯ ಪೂರ್ವಜರಾದ ಆರೆಸ್ಸೆಸ್ಸ್, ವಿಶ್ವ ಹಿಂದೂ ಪರಿಷತ್ತಿನ ನಾಯಕರು ಬ್ರಿಟಿಷರ ಗುಲಾಮರು: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುವುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತನ್ನು ತಿರುಚಿದ್ದಾರೆ. ಬಿಜೆಪಿ ಪೂರ್ವಜರಾದ ಆರೆಸ್ಸೆಸ್ಸ್ ಹಾಗೂ ವಿಶ್ವ ಹಿಂದೂ ಪರಿಷತ್ತಿನ ನಾಯಕರು ಬ್ರಿಟಿಷರ ಗುಲಾಮರಾಗಿದ್ದರು ಎಂದು ಟೀಕಿಸಿದರು.


ಕಾಂಗ್ರೆಸ್ ಮುಖಂಡರನ್ನು ನಾಯಿಗಳಿಗೆ ಹೋಲಿಸಿರುವ ಬಿಜೆಪಿ ಮುಖಂಡರನ್ನು ಏನೆಂದು ಕರೆಯಬೇಕೋ ತಿಳಿಯುತ್ತಿಲ್ಲ. ನಾವಂತೂ ಅವರನ್ನು ನಾಯಿಗೆ ಹೋಲಿಸುವುದಿಲ್ಲ. ಕಾರಣ ನಾಯಿ ಅತ್ಯಂತ ನಿಯತ್ತಿನ ಪ್ರಾಣಿಯಾಗಿದೆ. ಹೀಗಾಗಿ ಅವರನ್ನು ಬೇರೆ ಪ್ರಾಣಿಗೆ ಹೋಲಿಸಬೇಕು. ಇವರಿಗೆ ಯಾವ ಪ್ರಾಣಿ ಸೂಕ್ತ ಎಂದು ನಂತರದ ದಿನಗಳಲ್ಲಿ ಹೇಳುತ್ತೇನೆ ಎಂದು ತಿಳಿಸಿದರು.


2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಚುನಾವಣಾ ಸಮಿತಿಯನ್ನು ರಚಿಸಿದ್ದು, ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Join Whatsapp
Exit mobile version