ಬೆಂಗಳೂರು: ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ (FSL) ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಫ್ ಎಸ್ ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಎಫ್ ಎಸ್ ಎಲ್ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜಿ. ಪರಮೇಶ್ವರ್, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು.