ಗೋಹತ್ಯೆ ನಿಷೇಧ ಕಾನೂನು ರದ್ದತಿ ಸುಳಿವು: ಮುಂದುವರಿದ ಬಿಜೆಪಿ ಪ್ರತಿಭಟನೆ

Prasthutha|

ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ರದ್ದತಿ ಸುಳಿವು ನೀಡಿರುವ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆ ವಿರೋಧಿಸಿ ಬಿಜೆಪಿ ಮಂಗಳವಾರ ಕರ್ನಾಟಕದಾದ್ಯಂತ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವಾರು ಬಿಜೆಪಿ ಮುಖಂಡರು ಜಮಾಯಿಸಿ ಪ್ರತಿಭಟನೆಯ ಸಂಕೇತವಾಗಿ ಗೋಪೂಜೆ ನಡೆಸಿದರು. ಆದರೆ, ಬಿಜೆಪಿಯ ಯಾವೊಬ್ಬ ಸಂಸದ ಮತ್ತು ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ.



Join Whatsapp