ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾಗಿದ್ದು, ಈ ಮೂಲಕ ಏಕನಾಥ್ ಶಿಂಧೆ ಮೊದಲ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿಯ ಅಭ್ಯರ್ಥಿ ರಾಹುಲ್ 164 ಮತಗಳನ್ನು ಪಡೆದು ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಶಿವಸೇನಾದ ಶಾಸಕ ರಾಜನ್ ಸಾಳ್ವಿ ಅವರನ್ನು ಸ್ಪೀಕರ್ ಚುನಾವಣೆ ಕಣಕ್ಕಿಳಿಸಿದ್ದವು. ಆದರೆ ಅವರು ಸೋಲುಂಡಿದ್ದಾರೆ.
ಗೋವಾದಲ್ಲಿ ತಂಗಿದ್ದ ಶಿವಸೇನಾದ ಶಾಸಕರು ಮತ್ತು ಪಕ್ಷೇತರ ಸದಸ್ಯರು ಸ್ಪೀಕರ್ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮುಂಬೈಗೆ ಆಗಮಿಸಿದ್ದರು. ಸಿಎಂ ಆಗಿ ಪದಪ್ರಮಾಣ ಪಡೆದಿರುವ ಬಂಡಾಯ ನಾಯಕ ಏಕನಾಥ್ ಶಿಂದೆ ನಾಳೆ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ.