ಪಾಟ್ನಾ: ನಿತೀಶ್ ಕುಮಾರ್ ಇಂದು ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ಗೆ ರಾಜೀನಾಮೆ ಸಲ್ಲಿಸುವುದರೊಂದಿಗೆ ಸರಕಾರ ಪತನವಾಗಿದ್ದು, ಬಿಜೆಪಿ ಮೈತ್ರಿಯಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದೆ. ನಿತೀಶ್ ಕುಮಾರ್ ಅವರೇ ಹೊಸ ಸರಕಾರದ ಮುಖ್ಯಮಂತ್ರಿಯಾಗಲಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾರನ್ನು ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ, ಜೆಡಿಯು ಮತ್ತು ಇತರ ಮಿತ್ರಪಕ್ಷಗಳೊಂದಿಗೆ ರಾಜ್ಯದಲ್ಲಿ ಎನ್ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಹಾರ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.