Home ಜಾಲತಾಣದಿಂದ ಬಿಜೆಪಿಯಿಂದ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಬಿಜೆಪಿಯಿಂದ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

►ಮೂಡಿಗೆರೆ, ಬೈಂದೂರು ಕ್ಷೇತ್ರದ ಶಾಸಕರು ಸೇರಿ 7 ಹಾಲಿ ಶಾಸಕರಿಗೆ ಕೊಕ್!

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ ಒಟ್ಟು 23 ಮಂದಿಗೆ ಟಿಕೆಟ್ ಘೋಷಿಸಲಾಗಿದ್ದು, 7 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಎರಡನೇ ಪಟ್ಟಿಯಲ್ಲಿ ಮೈಸೂರಿನ ಕೆಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್​​ಎ ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ.

ಬುಧವಾರವಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದ ಜಗದೀಶ್ ಶೆಟ್ಟರ್ ಹೆಸರು ಎರಡನೇ ಪಟ್ಟಿಯಲ್ಲೂ ಕಂಡುಬಂದಿಲ್ಲ.
ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾಸ್ವಾಮಿ, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿಗೂ ಟಿಕೆಟ್ ನಿರಾಕರಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನೂ ಕೈಬಿಡಲಾಗಿದೆ.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಲಾಗಿತ್ತು.

ಎರಡನೇ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಅಭ್ಯರ್ಥಿಗಳು

ದೇವರ್ ಹಿಪ್ಪರಗಿ – ಸೋಮನಗೌಡ ಪಾಟೀಲ್ (ಸಾಸನೂರು)

ಬಸವನ ಬಾಗೇವಾಡಿ – ಎಸ್​ಕೆ ಬೆಳ್ಳುಬ್ಬಿ

ಇಂಡಿ – ಕಾಸಗೌಡ ಬಿರದಾರ್ಗು

ರುಮಿಟ್ಕಲ್ – ಲಲಿತ ಅನಾಪುರ್ಬೀ

ದರ್ – ಈಶ್ವರ್ ಸಿಂಗ್ ಠಾಕೂರ್

ಬಾಲ್ಕಿ- ಪ್ರಕಾಶ್ ಖಂಡ್ರೆ

ಗಂಗಾವತಿ – ಪ್ರಸನ್ನ ಮುನವಳ್ಳಿ

ಕಲಘಟಗಿ – ನಾಗರಾಜ್ ಛಬ್ಬಿ

ಹಾನಗಲ್ – ಶಿವರಾಜ್ ಸಜ್ಜನರ್

ಹಾವೇರಿ (ಎಸ್​ಸಿ) – ಗವಿಸಿದ್ದಪ್ಪ ದ್ಯಾಮಣ್ಣನವರ್

ಹರಪ್ಪನಹಳ್ಳಿ – ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ – ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ – ಅಜಯ್ ಕುಮಾರ್

ಮಾಯಕೊಂಡ (ಎಸ್​ಸಿ) – ಬಸವರಾಜ ನಾಯ್ಕ್

ಚನ್ನಗಿರಿ – ಶಿವಕುಮಾರ್

ಬೈಂದೂರು – ಗುರುರಾಜ್ ಗಂಟಿಹೊಳೆ

ಮೂಡಿಗೆರೆ (ಎಸ್​ಸಿ) – ದೀಪಕ್ ದೊಡ್ಡಯ್ಯ

ಗುಬ್ಬಿ – ಎಸ್​ಡಿ ದಿಲೀಪ್ ಕುಮಾರ್

ಶಿಡ್ಲಘಟ್ಟ – ರಾಮಚಂದ್ರ ಗೌಡ

ಕೆಜಿಎಫ್ (ಎಸ್​ಸಿ) – ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ- ಚಿದಾನಂದ

ಅರಸಿಕೆರೆ- ಜಿವಿ ಬಸವರಾಜು

ಹೆಗ್ಗಡದೇವನಕೋಟೆ- ಕೃಷ್ಣ ನಾಯ್ಕ್

Join Whatsapp
Exit mobile version