ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ‘ಹಾವು’ ಬಿಡುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಬಿಜೆಪಿ ಪಕ್ಷದವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಅವರಿಗೇ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಕಾಂಗ್ರೆಸ್ ಕಿಟಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ Vs ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ. ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ. ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿ.ಡಿ ಹಾವೇ?”ಎಂದು ಕುಟುಕಿದೆ.
ಹುಕ್ಕೇರಿಯಲ್ಲಿ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ತಮ್ಮ ತಂಟೆಗೆ ಬಂದರೆ ನಿಜವಾದ ಹಾವು ಬಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.