ಕಾಂಗ್ರೆಸ್‌ ನಿಂದ ಅವಿಶ್ವಾಸ ನಿರ್ಣಯ ಸಾಧ್ಯತೆ: ಕೋವಿಡ್ ಪೊಸಿಟೀವ್ ಶಾಸಕರಿಗೂ ವಿಪ್ ಜಾರಿಗೊಳಿಸಿದ ಬಿಜೆಪಿ

Prasthutha|

ಬೆಂಗಳೂರು: ವಿರೋಧ ಪಕ್ಷ ಕಾಂಗ್ರೆಸ್ ನಿಂದ ಅವಿಶ್ವಾಸ ನಿರ್ಣಯವನ್ನು ಎದುರಿಸಬೇಕಾದ ಹಿನ್ನೆಲೆಯಲ್ಲಿ ಆಡಳಿತ ಬಿ.ಜೆ.ಪಿ ಪಕ್ಷವು ತನ್ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದೆ. ಶುಕ್ರವಾರದಂದು ತಡ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷ  ಸಭೆಯಲ್ಲಿ ವಿಪ್ ಜಾರಿಗೊಳಿಸಲಾಗಿದೆ.

“ಕೋವಿಡ್-19 ಪೊಸಿಟೀವ್ ವರದಿ ಬಂದಿರುವ 17-18 ಶಾಸಕರನ್ನೊಳಗೊಂಡಂತೆ ಎಲ್ಲರಿಗೂ ವಿಪ್ ಜಾರಿಗೊಳಿಸಲಾಗಿದೆ” ಎಂಬುದಾಗಿ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ‌ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದ್ದರು

- Advertisement -