ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಲೇ ಬಂದಿದ್ದ ಎಂಎಲ್ ಸಿ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್ ಜೊತೆ ಸಿಎಂ ಹಂಚಿಕೊಂಡಿದ್ದಾರೆ.
ರಾಜ್ಯ ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ರಾಜಕೀಯ ಹೋರಾಟ ಹಾಗೂ ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಸಭೆಗಳ ಕುರಿತು ಹರಿಪ್ರಸಾದ್‌ರೊಂದಿಗೆ ವಿಸ್ತೃತವಾಗಿ ಚರ್ಚಿಸಿದ ಸಿಎಂ, ಆ.10ರಂದು ಮೈಸೂರಿನಲ್ಲಿ ನಡೆಸಲು ಉದ್ದೇಶಿಸಿರುವ ಜನಾಂದೋಲನ ಸಭೆಯ ಸಮಾರೋಪಕ್ಕೆ ಆಹ್ವಾನಿಸಿದರು.