ಬೆಂಗಳೂರು: ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ.
ಅದರಲ್ಲೂ ಮುಖ್ಯವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.