ಬಿಕೆ ಹರಿಪ್ರಸಾದ್ ಸಿಎಂ ಬದಲಾವಣೆ ಹೇಳಿಕೆ: ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದ ಡಿಕೆಶಿ

Prasthutha|

ಬೆಂಗಳೂರು: ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.

- Advertisement -


ರಾಜಕಾರಣದಲ್ಲಿ ಎಲ್ಲ ಸಮಾನರು, ಯಾವ ಅಸಮಾಧಾನವೂ ಇಲ್ಲ, ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. “ಬಿ.ಕೆ. ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ, ಹೀಗಾಗಿ ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದರ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ” ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

Join Whatsapp