ಜ. 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ: ಬಿಕೆ ಹರಿಪ್ರಸಾದ್

Prasthutha|

- Advertisement -

ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ ಕಾಂಗ್ರೆಸ್ ಮುಖಂಡ, ಎಂಎಲ್​ ಸಿ ಬಿ.ಕೆ.ಹರಿಪ್ರಸಾದ್ ಎಂದು ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ ಇದೊಂದು ರಾಜಕೀಯ ಕಾರ್ಯಕ್ರಮ ಎಂದರು.

ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ. ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೇವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ. ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ ಎಂದು ಹೇಳಿದರು.

Join Whatsapp