ರಾಜಸ್ತಾನ: ಬ್ಲಾಕ್ ಮೇಲ್ ಮಾಡಿ ಎರಡು ವರ್ಷಗಳ ಕಾಲ ಯುವತಿಯ ಮೇಲೆ ನಿರಂತರ ಅತ್ಯಾಚಾರ

Prasthutha: July 2, 2021

ರಾಜಸ್ತಾನ: ಯುವತಿಯೋರ್ವಳನ್ನು ಬ್ಲ್ಯಾಕ್ ಮೇಲ್ ಮಾಡಿ ಎರಡು ವರ್ಷಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರಗೈದ ಆಘಾತಕಾರಿ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಏಪ್ರಿಲ್ 2019 ರಿಂದ ಆರೋಪಿಗಳು 21 ವರ್ಷ ಪ್ರಾಯದ ಯುವತಿ ಮೇಲೆ ಅತ್ಯಾಚಾರವೆಸಗುತ್ತಿದ್ದರು. ಈ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 2019ರಲ್ಲಿ, ಯುವತಿ ಪರೀಕ್ಷೆಗೆ ಹಾಜರಾಗಲು ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದನ್ನು ವೀಡಿಯೋ ಮಾಡಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿ, ನಿರಂತರವಾಗಿ ಎರಡು ವರ್ಷಗಳ ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪ್ರಕರಣದ ತನಿಖಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


ಈ ಹಿಂದೆ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂಬ ಮಹಿಳೆಯ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. “ಈ ಘಟನೆಯ ಬಗ್ಗೆ 2019ರಲ್ಲಿ ಪೊಲೀಸರಿಗೆ ದೂರು ನೀಡಿದಾಗ ಪೊಲೀಸರು ಎಫ್ಐಆರ್ ದಾಖಲಿಸಲಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಈ ಆರೋಪದ ಬಗ್ಗೆಯೂ ನಾವು ವಿಚಾರಣೆ ನಡೆಸುತ್ತಿದ್ದೇವೆ. ಪೊಲೀಸರ ಕಡೆಯಿಂದ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ”ಎಂದು ಅಧಿಕಾರಿ ತಿಳಿಸಿದ್ದಾರೆ.


ಅತ್ಯಾಚಾರವೆಸಗಿದ ಮೂವರು ಆರೋಪಿಗಳಲ್ಲದೆ ನಾಲ್ಕನೇ ವ್ಯಕ್ತಿಯೋರ್ವ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದಾಗ ಯುವತಿ ಜೂನ್ 28ರಂದು ಪೊಲೀಸರು ದೂರು ನೀಡಿದ್ದಾಳೆ. ಈ ಮೂರನೇ ವ್ಯಕ್ತಿಯು ಸಂತ್ರಸ್ತೆಯನ್ನು ಸಂಪರ್ಕಿಸಿ ತನ್ನನ್ನು ಭೇಟಿಯಾಗುವಂತೆ ಒತ್ತಡ ಹಾಕುತ್ತಿದ್ದ. ಇದನ್ನು ನಿರ್ಲಕ್ಷಿಸಿದಾಗ ಆತ ನಿನ್ನ ವೀಡಿಯೊ ನನ್ನ ಬಳಿ ಇದೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಸಂತ್ರಸ್ತೆ ಎಫ್ಐಆರ್ ದಾಖಲಿಸಿದ್ದಾಳೆ. ನಾವು ಇದುವರೆಗೆ 2019ರಿಂದ ಆಕೆಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಪುರುಷರು ಮತ್ತು ಅವಳನ್ನು ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶದಿಂದ ಇತ್ತೀಚೆಗೆ ಸಂಪರ್ಕಿಸಿದ ಮೂರನೇ ವ್ಯಕ್ತಿಯನ್ನು ಬಂಧಿಸಿದ್ದೇವೆ. ಮತ್ತೋರ್ವ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇನೆ ಎಂದು ತನಿಖಾ ಅಧಿಕಾರಿ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ