‘ಕಪ್ಪು ಪ್ರತಿಭಟನೆ’: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR ದಾಖಲು

Prasthutha|

ನವದೆಹಲಿ: ನಿರುದ್ದೋಗ ಮತ್ತು ಬೆಲೆ ಏರಿಕೆ ವಿರುದ್ಧ ಕಪ್ಪು ಪಟ್ಟಿ ಧರಿಸಿ ಶುಕ್ರವಾರ ನಡೆಸಿದ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

- Advertisement -

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ), 332 (ಸ್ವಯಂಪ್ರೇರಿತವಾಗಿ ಸಾರ್ವಜನಿಕ ಸೇವಕರನ್ನು ತಡೆಯಲು ನೋವುಂಟುಮಾಡುವುದು) ಮತ್ತು ಭಾರತೀಯ ದಂಡ ಸಂಹಿತೆಯ (IPC) 34 (ಸಾಮಾನ್ಯ ಉದ್ದೇಶ) ಮತ್ತು ಭಾರತೀಯ ದಂಡ ಸಂಹಿತೆಯ (IPC) 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ (ನವದೆಹಲಿ) ಅಮೃತಾ ಗುಗುಲೋತ್ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು 65 ಕಾಂಗ್ರೆಸ್ ಸಂಸದರನ್ನು ವಿಜಯ್ ಚೌಕ್ ನಲ್ಲಿ ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದರು.

Join Whatsapp