ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ABVP ಅಧ್ಯಕ್ಷನಿಂದ ಬ್ಲಾಕ್’ಮೇಲ್: ಬಂಧನಕ್ಕೆ ಆಗ್ರಹ

Prasthutha|

ಶಿವಮೊಗ್ಗ: ವಿದ್ಯಾರ್ಥಿನಿಯ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್’ಮೇಲ್ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್ಎಸ್ ಯು ಐ ಒತ್ತಾಯಿಸಿದೆ.

- Advertisement -


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಎಬಿವಿಪಿ ತಾಲೂಕು ಅಧ್ಯಕ್ಷ ಪ್ರತಿಗೌಡ ಎಂಬಾತ ವಿದ್ಯಾರ್ಥಿನಿಯ ಅಶ್ಲೀಲ ಚಿತ್ರವನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಆರೋಪಿ.


ಪ್ರತಿಗೌಡ ಎಬಿವಿಪಿಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ, ಆಕೆಯನ್ನು ನಗ್ನಳಾಗುವಂತೆ ಒತ್ತಾಯಿಸಿದ್ದಾನೆ. ಆ ಕೃತ್ಯವನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಆ ವಿಡಿಯೋ ಇಟ್ಟುಕೊಂಡು ಆಕೆಯನ್ನು ಬ್ಲಾಕ್’ಮೇಲ್ ಮಾಡಲು ಆರಂಭಿಸಿದ್ದಾನೆ. ಅಲ್ಲದೆ, ಜೂನ್ 16ರಂದು ಆ ವಿಡಿಯೋವನ್ನು ವಾಟ್ಸಾಪ್ ನಲ್ಲಿ ಹರಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

- Advertisement -


ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಆರೋಪಿ ಪ್ರತಿಗೌಡನನ್ನು ಬಂಧಿಸುವಂತೆ ಎನ್ಎಸ್ ಯು ಐ ಸಂಘಟನೆ ಒತ್ತಾಯಿಸಿದ್ದು, ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದೆ.

Join Whatsapp