Home ಟಾಪ್ ಸುದ್ದಿಗಳು ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ | ಮೂವರ ಸಾವು; ಹಲವರ ಸ್ಥಿತಿ ಚಿಂತಾಜನಕ

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ | ಮೂವರ ಸಾವು; ಹಲವರ ಸ್ಥಿತಿ ಚಿಂತಾಜನಕ

ಕರ್ನಲ್ : ಹರ್ಯಾಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಘಟನೆಯಲ್ಲಿ ಮೂವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕರ್ನಲ್ ನಲ್ಲಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದಿದ್ದುದರಿಂದ, ಹೆಚ್ಚಿನ ಅಬಾಹುತ ತಪ್ಪಿದೆ. ಆದರೆ, ಕೆಲಸ ಮಾಡುತ್ತಿದ್ದ ಮೂವರು ಪಟಾಕಿ ಬೆಂಕಿಗೆ ಬಲಿಯಾಗಿದ್ದಾರೆ.

ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ಗುರುತಿಸಲಾಗಿಲ್ಲ. ಇವರೆಲ್ಲರೂ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರಾಗಿದ್ದರು. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Join Whatsapp
Exit mobile version