Home ಟಾಪ್ ಸುದ್ದಿಗಳು ಮಧ್ಯ ಪ್ರದೇಶ; ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಾಲೀಕರ ಬಂಧನ

ಮಧ್ಯ ಪ್ರದೇಶ; ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಾಲೀಕರ ಬಂಧನ

ಭೂಪಾಲ್: ಮಧ್ಯಪ್ರದೇಶದ ಹರ್ದಾ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 174 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ನಡೆದ ಕೆಲ ಗಂಟೆಗಳ ನಂತರ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾರ್ಖಾನೆ ಮಾಲೀಕರನ್ನು ರಾಜೇಶ್ ಅಗರವಾಲ್ ಮತ್ತು ಸೋಮೇಶ್ ಅಗರವಾಲ್ ಎಂದು ಗುರುತಿಸಲಾಗಿದೆ.

ಈ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆಗೆ ಶಿಕ್ಷೆ), 308 ( ನರಹತ್ಯೆಗೆ ಯತ್ನ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಖಾನ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು.

Join Whatsapp
Exit mobile version