ಶಿವಮೊಗ್ಗದಲ್ಲಿ ಭಾರೀ ಸ್ಫೋಟ : ಕನಿಷ್ಠ 6 ಬಲಿ; 15 ಮಂದಿ ಸಾವಿಗೀಡಾಗಿರುವ ಸಾಧ್ಯತೆ

Prasthutha|

ಶಿವಮೊಗ್ಗ : ಇಲ್ಲಿನ ಹುಣಸೋಡು ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶವೊಂದರಲ್ಲಿ ಕಳೆದ ರಾತ್ರಿ ಭೀಕರ ಸ್ಫೋಟವೊಂದು ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಕಾರ್ಮಿಕರು ಸಾವಿಗೀಡಾಗಿರುವ ಶಂಕೆಯಿದೆ.

- Advertisement -

ಸ್ಫೋಟದ ತೀವ್ರತೆಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎನ್ನಲಾಗಿದೆ. ಹಲವು ಮನೆ ಕಟ್ಟಡಗಳಿಗೆ ಹಾನಿಯಾಗಿದೆ. ಭಯಭೀತರಾದ ಜನ ಮನೆಗಳಿಂದ ದಿಕ್ಕಾಪಾಲಾಗಿ ಹೊರಗೆ ಓಡಿದ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ರಾತ್ರಿ 10:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೃತ ಕಾರ್ಮಿಕರ ಮೃತದೇಹಗಳು ಛಿದ್ರಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಗಣಿಗಾರಿಕೆ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿದೆ.  

Join Whatsapp