ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಭಾಗದ ಅಲರ್ಟ್‌ಗೆ ಗೃಹ ಸಚಿವ ಸೂಚನೆ

Prasthutha|

ಮಂಗಳೂರು: ಕೇರಳದ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟ ಸಂಬಂಧವಾಗಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಸೂಚನೆ ನೀಡಲಾಗಿದೆ. ಅಲ್ಲದೆ, ಕೇರಳ ಗಡಿ ಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

- Advertisement -

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಸಂದರ್ಭ ಬೆದರಿಕೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು ಎಂದರು. ರಾಜ್ಯದಲ್ಲಿ ಸೈಬರ್ ಕ್ರೈಮ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಗೃಹ ಸಚಿವರು, ಸೈಬರ್ ಕ್ರೈಮ್ ಪ್ರಕರಣಕ್ಕೆ ಕಡಿವಾಣ ಹಾಕಲು ಸಾಫ್ಟ್‌ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಷನಲ್, ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್‌ನಲ್ಲಿ ಕೊಂಡೊಯ್ಯಲು ಕ್ರಮ ವಹಿಸುತ್ತಿದ್ದೇವೆ ಎಂದು ಹೇಳಿದರು.

ಇನ್ನು ಪಿಎಸ್‌ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ‌ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಅಭಿಪ್ರಾಯವನ್ನು ಕೋರ್ಟ್‌ಗೆ ತಿಳಿಸಿದ್ದೇವೆ ಎಂದರು.

- Advertisement -

ವಿಜಯನಗರ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ಅದನ್ನು ನಮ್ಮ ಎಸ್ಪಿ ಲೆವೆಲ್ ನಲ್ಲಿಯೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ಕೇರಳದಲ್ಲಿ ಬೆಚ್ಚಿ ಬೀಳಿಸುವ ಸ್ಫೋಟ

ಕೇರಳ ರಾಜ್ಯದಲ್ಲಿ ಎರ್ನಾಕುಲಂ ಕೇವಲ ಐದೇ ಸೆಕೆಂಡ್‌ಗಳ ಅಂತರದಲ್ಲಿ ಬೆಚ್ಚಿ ಬೀಳಿಸುವ ಸರಣಿ ಸ್ಪೋಟ ಭಾನುವಾರ ಸಂಭವಿಸಿದೆ. ಒಟ್ಟು ನಾಲ್ಕು ಕಡೆಗಳಲ್ಲಿ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದು, ಒಟ್ಟು ಸುಮಾರು 24 ಮಂದಿ ಗಾಯಗೊಂಡಿದ್ದಾರೆ.

ಕೇರಳದ ಎರ್ನಾಕುಲಂನಲ್ಲಿನ ಕಲಮ್‌ಸ್ಸೆರಿ ಕನ್ವೆಂಷನ್ ಸೆಂಟರ್‌ನಲ್ಲಿ ಸರಣಿ ಸ್ಟೋಟ ಸಂಭವಿಸಿದೆ. ಈ ಕೇಂದ್ರದಲ್ಲಿ ‘ಯೆಹೋವನ ಶಕ್ತಿ’ ಹೆಸರಿನ ಭಕ್ತರ ಸಭೆಯಲ್ಲಿ ಸಾವಿವರಾರು ಮಂದಿ ಪಾಲ್ಗೊಂಡಿದ್ದರು. ಇಂತಹ ಸಾರ್ವಜನಿಕ ಸ್ಥಳದಲ್ಲಿ ಇಂತದ್ದೊಂದು ಸ್ಪೋಟ ನಾಲ್ಕು ಬಾರಿ ಸರಣಿಯಾಗಿ ನಡೆದಿದೆ. ಇಂದು ಬೆಳಗ್ಗೆ 9.30ರ ನಂತರ ಜರುಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Join Whatsapp