ಲೂಧಿಯಾನ: ಪಂಜಾಬ್ ನ ಲೂಧಿಯಾನದಲ್ಲಿ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಟ್ಟಡದ ಎರಡನೇ ಮಹಡಿಯಲ್ಲಿರುವ ಸ್ನಾನಗೃಹದಲ್ಲಿ ಇಂದು ಮಧ್ಯಾಹ್ನ ಸುಮಾರು 12:22 ಕ್ಕೆ ಭೀಕರ ಸ್ಫೋಟ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಸ್ನಾನಗೃಹದ ಗೋಡೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದೆ ಮತ್ತು ಹತ್ತಿರದ ಕೋಣೆಗಳ ಕಿಟಕಿಗಳ ಗಾಜು ಒಡೆದು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದೆ.
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.