ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ ತಡೆ ನೀಡಿ, ಸಂಘಟಕರ ಮೇಲೆ ದೇಶದ್ರೋಹದ ಕೇಸು ದಾಖಲಿಸಿ:  ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿಯಾದ SDPI ನಿಯೋಗ

Prasthutha|

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್’ಗಳನ್ನು ಅಂಟಿಸಲಾಗಿದ್ದು, ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವೀಡಿಯೊಗಳು ಹರಿದಾಡುತ್ತಿವೆ. ಇದೊಂದು ಕಾನೂನು ಬಾಹಿರ ಮತ್ತು ದೇಶವಿರೋಧಿ ಸಭೆಯಾಗಿದ್ದು, ಭಾರತವು ಪರಿಪೂರ್ಣ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಸಂವಿಧಾನ ಪ್ರಬಲವಾಗಿ ಪ್ರತಿಪಾದಿಸಿರುತ್ತದೆ, ಈ ದೇಶವು ಯಾವುದೇ ಧರ್ಮದ ಆಧಾರದಲ್ಲಿ ಗುರುತಿಸುವ ದೇಶವೆಂದು ಉಲ್ಲೇಖಿಸುವುದು ಕಾನೂನು ಬಾಹಿರ ಮತ್ತು ದೇಶದ್ರೋಹದ ಕ್ರತ್ಯವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದೇಶದ್ರೋಹಿ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಮತ್ತು ಈಗಾಗಲೇ ಜಿಲ್ಲಾದ್ಯಂತ ಪೋಸ್ಟರ್ ಅಂಟಿಸಿ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಹಿಂದೂ ಜನಜಾಗೃತಿ ಸಮಿತಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಆ ಸಂಘಟನೆಯನ್ನು ನಿಷೇಧ ಮಾಡಿ ಅದರ ಮುಖಂಡರನ್ನು ಬಂಧಿಸಬೇಕು ಎಂದು ನಿಯೋಗವು ಮಂಗಳೂರು ನಗರ ಪೊಲೀಸ್ ಕಮಿಷನರ್’ರವರನ್ನು ಒತ್ತಾಯಿಸಿದೆ

- Advertisement -

ನಿಯೋಗದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ವ, ಉಳ್ಳಾಲ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ಉಪಸ್ಥಿತರಿದ್ದರು.

Join Whatsapp