ಪಾಂಡೇಶ್ವರದಲ್ಲಿ ಬೃಹತ್ ರಕ್ತದಾನ ಶಿಬಿರ

Prasthutha|

ಜನಾಬ್ ಎಮ್ಮೆಕರೆ ಸಲಾಂರವರ ನೇತೃತ್ವದಲ್ಲಿ ಟೀಮ್ ಟೈಗರ್ಸ್ ಮಂಗಳೂರು ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು, ಲಯನ್ಸ್ ಕ್ಲಬ್ ಸೆಂಚುರಿಯನ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಭಾನುವಾರ ಮಂಗಳೂರಿನಲ್ಲಿ‌ ನಡೆಯಿತು.

 ಮಂಗಳೂರು ಪಾಂಡೇಶ್ವರದ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಹಲವಾರು ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

- Advertisement -

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೆ.ಅಶ್ರಫ್ ಅವರು, ವಾಯ್ಸ್ ಆಫ್ ಬ್ಲಡ್ ಡೋನರ್ಸ್ ತಂಡ‌ ಹಳ್ಳಿ ಹಳ್ಳಿಗಳಲ್ಲಿ ‌ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ವರ್ಷ ಪೂರ್ತಿ ಮಾಡುತ್ತಾ ಬಂದಿದ್ದು, ಬಡ ವರ್ಗಕ್ಕೆ ನೆರವು ನೀಡುತ್ತಾ ಬಂದಿದೆ. ರಕ್ತದಾನಕ್ಕಿಂತ ಮಹಾನ್ ದಾನ ಇನ್ನೊಂದಿಲ್ಲ. ಇವರ ಈ ಸಮಾಜಸೇವೆಗೆ ದೇವರು ಮತ್ತಷ್ಟು ಶಕ್ತಿ ಕೊಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಸಲಾಂ ಎಮ್ಮೆಕೆರೆ, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರವೂಫ್, ಅರ್ಶದ್ ಕಂದಕ್, ರಮಾನಂದ್, ಸುಧಾಕರ್ ಶೆಣೈ, ಮುನೀರ್ ಪಾಂಡೇಶ್ವರ, ನಿಶಾದ್ ಎಮ್ಮೆಕೆರೆ ಮತ್ತಿತರರು ಉಪಸ್ಥಿತರಿದ್ದರು.

- Advertisement -