ಅಬುದಾಬಿ ಅನಿವಾಸಿ ಕನ್ನಡಿಗರ ಒಕ್ಕೂಟದ ವತಿಯಿಂದ ರಕ್ತದಾನ ಶಿಬಿರ

Prasthutha: April 6, 2021

ಅನಿವಾಸಿ ಕನ್ನಡಿಗರ ಒಕ್ಕೂಟ ಅಬುದಾಬಿ ವತಿಯಿಂದ ರಕ್ತದಾನ ಶಿಬಿರವು ಇತ್ತಿಚೆಗೆ ಖಾಲಿದಿಯ ಬ್ಲಡ್ ಬ್ಯಾಂಕ್ ಅಬುದಾಬಿ ಇದರ ಸಹಯೋಗದೊಂದಿಗೆ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅನಿವಾಸಿ ಕನ್ನಡಿಗರ ಒಕ್ಕೂಟದ ಮಹಮ್ಮದ್ ಶರೀಫ್ ಸರ್ವೆ ಪ್ರಾಸ್ತಾವಿಕವಾಗಿ ಮಾತನಾಡಿ ಒಬ್ಬರ ರಕ್ತ ಇನ್ನೊಬ್ಬರಿಗೆ ನೀಡಿ, ಜೀವವನ್ನು ಉಳಿಸುವುದಾದರೆ ನಾವೆಲ್ಲರೂ ರಕ್ತದಾನ ಮಾಡಿ ಪರಸ್ಪರ ರಕ್ತ ಸಂಬಂಧಿಗಳಾಗೋಣ ಎಂದು ಹೇಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅನಿವಾಸಿ ಕನ್ನಡಿಗರ ಒಕ್ಕೂಟ ಇದರ  ನಾಸಿರ್ ಸನಾ, ರಕ್ತವನ್ನು ನೀಡಿ ಕಾರ್ಯಕ್ರಮದ  ಯಶಸ್ವಿಗೆ ಪ್ರಮುಖ ಪಾತ್ರ ವಹಿಸಿದ್ದರು. ರಕ್ತದಾನ ಶಿಬಿರ ಮದ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯ ತನಕ  ಸರಿಸುಮಾರು 44 ರಕ್ತದಾನಿಗಳು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು. ಅನಿವಾಸಿ ಕನ್ನಡಿಗರ  ಒಕ್ಕೂಟ ಯು. ಎ ಇ ಇಂತಹ ಹಲವಾರು  ಸಾಮಾಜಿಕ  ಕಾರ್ಯಕ್ರಮ ಕೈಗೊಂಡು ಎಲ್ಲರ  ಮೆಚ್ಚುಗೆಗೆ ಪಾತ್ರವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!