Home ಕರಾವಳಿ ಕಾನ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ವತಿಯಿಂದ ರಕ್ತದಾನ ಶಿಬಿರ

ಕಾನ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಕಾನ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಫೋರಮ್ ಅಧ್ಯಕ್ಷ ಇರ್ಫಾನ್ ಕಾನ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು.

ಶಿಬಿರವು ಕಾನ ಮಸೀದಿ ಬಳಿಯ ಕಟ್ಟಡದಲ್ಲಿ ಜರಗಿತು ಮತ್ತು 65 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಫೀಕ್ ಕಾನ, ಅನ್ಸಾರ್ ಕಾನ, ಅಶ್ರಫ್ ಬದ್ರಿಯಾ, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕುಲಾಯಿ ಇದರ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಕುಲಾಯಿ ಉಪಸ್ಥಿತರಿದ್ದರು. ಇರ್ಫಾನ್ ಕಾಲೋನಿ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version