ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಳ್ಳಾಲ ವತಿಯಿಂದ ಡಿ.26 ಕ್ಕೆ ರಕ್ತದಾನ ಶಿಬಿರ

Prasthutha|

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಳ್ಳಾಲ ಮತ್ತು ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಇದರ ಸಂಯೋಗದೊಂದಿಗೆ ಡಿಸೆಂಬರ್ 26 ರಂದು ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

- Advertisement -

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ವತಿಯಿಂದ ನಡೆಯುವ ಈ ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ರಕ್ತದಾನಿಗಳು ಆಗಮಿಸಿ ಈ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಫಾರಂ ನ ಉಪಾಧ್ಯಕ್ಷ ಅಲ್ತಾಫ್ ಉಳ್ಳಾಲ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Join Whatsapp