IMI ,KMD ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಸಂಸ್ಥೆ ಮಂಗಳೂರು ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Prasthutha|

ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಂಗಳೂರು ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು. ಈ ಬಾರಿಯ ಲಾಕ್‌ ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್‌ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ|ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್‌ ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.

- Advertisement -

ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಐಎ0ಐ ಅಧ್ಯಕ್ಷ ಅಶ್ರಫ್, ರೆಡ್‌ ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸದಸ್ಯರು ಉಪಸ್ಥಿತರಿದ್ದರು

- Advertisement -