ಮಂಗಳೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಚೊಕ್ಕಬೆಟ್ಟು ಏರಿಯಾ ವತಿಯಿಂದ ರಕ್ತದಾನ ಶಿಬಿರ

Prasthutha|

ಮಂಗಳೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಚೊಕ್ಕಬೆಟ್ಟು ಏರಿಯಾ ವತಿಯಿಂದ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಕಾಟಿಪಳ್ಳದ ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರವು ನಡೆಯಿತು.

- Advertisement -

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಉಪಾಧ್ಯಕ್ಷ ಅಮಾನುಲ್ಲಾ ಉದ್ಘಾಟಿಸಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ನ ನಿಸ್ವಾರ್ಥ ಸೇವೆಯನ್ನು ಮೆಚ್ಚಿ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಪ್ರಜ್ವಲ್ ಸಂಘಟನೆಯ ಅಧ್ಯಕ್ಷರಾದ ಶಮೀರ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

- Advertisement -

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜುಮಾ ಮಸೀದಿ ಅದ್ಯಕ್ಷ ಟಿ.ಎಂ.ಬಶೀರ್, ಪಾಲಿಕೆ ಸದಸ್ಯೆ ಸಂಶಾದ್ ಅಬೂಬಕ್ಕರ್, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಮಂಗಳೂರು ಅಧ್ಯಕ್ಷ ಸುರೈ ಕುದ್ರೋಳಿ ಉಪಸ್ಥಿತರಿದ್ದರು.

ಅಝರ್ ಚೊಕ್ಕಬೆಟ್ಟು ಕಾರ್ಯಕ್ರಮ ನಿರೂಪಿಸಿದರು. 83 ಮಂದಿ ರಕ್ತದಾನಗೈದರು.

Join Whatsapp