ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥಾಪನಾ ದಿನ: ಯಶಸ್ವಿ ಏಳು ವರ್ಷ ಪೂರೈಸಿ ಎಂಟನೇ ವರ್ಷಕ್ಕೆ ಪಾದಾರ್ಪಣೆ

Prasthutha|

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯು ಇಂದು ( 08-08-2023 ) ಯಶಸ್ವೀ ಏಳು ವರ್ಷಗಳನ್ನು ಪೂರೈಸಿದ ಸಂಸ್ಥೆಯು ಎಂಟನೆಯ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) , 2016 ಆಗಸ್ಟ್ 08 ರಂದು ವಾಟ್ಸಾಪ್ ಮೂಲಕ ಸ್ಥಾಪನೆಗೊಂಡ ಸಂಸ್ಥೆಯು “ನಾವು ರಕ್ತ ಸಂಬಂಧಿಗಳಾಗೋಣ” ಎಂಬ ದ್ಯೇಯ ವಾಕ್ಯದೊಂದಿಗೆ ಯಶಸ್ವೀ ಏಳು ವರ್ಷಗಳನ್ನು ಪೂರೈಸಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯು ಈ ವರೆಗೆ 237 ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 28 ಆಸ್ಪತ್ರೆಯ ರಕ್ತನಿಧಿಗಳ ಸಹಯೋಗದೊಂದಿಗೆ 231 ರಕ್ತದಾನ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 13676 ಯೂನಿಟ್ ರಕ್ತವನ್ನು ಸಂಗ್ರಹಿಸಿದ್ದು ಹಾಗೂ ತುರ್ತು ಸಂದರ್ಭಗಳಲ್ಲಿ ನೇರವಾಗಿ ರಕ್ತನಿಧಿಗಳಿಗೆ 2751 ರಕ್ತದಾನಿಗಳನ್ನು ಪೂರೈಸುವ ಮೂಲಕ ಒಟ್ಟು 16427 ಯೂನಿಟ್ ರಕ್ತವನ್ನು ರಕ್ತನಿಧಿಗಳಿಗೆ ನೀಡುವಲ್ಲಿ ಯಶಸ್ವಿಯಾಗಿದೆ.ಒಂದೇ ತಿಂಗಳಿನಲ್ಲಿ ಗರಿಷ್ಟ 24 ರಕ್ತದಾನ ಶಿಬಿರಗಳನ್ನು ಹಾಗೂ ಒಂದೇ ದಿನದಲ್ಲಿ ಗರಿಷ್ಟ 21 ರಕ್ತದಾನ ಶಿಬಿರಗಳನ್ನು ಆಯೋಜಿಸಿದ ಕೀರ್ತಿಯನ್ನು ಕೂಡಾ ತನ್ನದಾಗಿಸಿ ಕೊಂಡಿದೆ.ದಿನನಿತ್ಯ ಸರಾಸರಿ 20 ರಿಂದ 30 ಯೂನಿಟ್ ರಕ್ತವನ್ನು ರೋಗಿಗಳಿಗೆ ಪೂರೈಸುತ್ತಿದೆ.ಅಲ್ಲದೇ ಪ್ರತಿನಿತ್ಯ ಆವಶ್ಯವಿರುವ ತಾಜಾ ರಕ್ತಗಳ ತುರ್ತು ಮನವಿಯನ್ನು ಕೂಡಾ ಸ್ವೀಕರಿಸಿ ದಾನಿಗಳನ್ನು ಹುಡುಕಿ ಅಗತ್ಯವಿರುವ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಪೂರೈಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದೆ.COVID – 19 ತುರ್ತು ಸಮಯದಲ್ಲಿ 672 ರಕ್ತದಾನಿಗಳನ್ನು ನೇರವಾಗಿ ರಕ್ತನಿಧಿಗಳಿಗೆ ಪೂರೈಸಿ ಕೊರೋನಾ ಭೀತಿಯ ನಡುವೆಯೂ ತುರ್ತು ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ರಕ್ತದಾನಿಗಳನ್ನು ಪೂರೈಕೆ ಮಾಡಿದ ಕೀರ್ತಿಗೆ ಪಾತ್ರವಾಗಿದೆ.

ಏಳು ವರ್ಷಗಳ ಸಾಧನೆಯ ಹಾದಿಯಲ್ಲಿ ಸಹಕರಿಸಿದ ಎಲ್ಲಾ ಜನಸ್ನೇಹಿ ರಕ್ತದಾನಿಗಳಿಗೆ,ಸಾರ್ವಜನಿಕರಿಗೆ,ಸಂಘ ಸಂಸ್ಥೆಗಳಿಗೆ,ರಕ್ತನಿಧಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ,ಪತ್ರಕರ್ತರಿಗೆ,ಮಾಧ್ಯಮ ಪ್ರತಿನಿಧಿಗಳಿಗೆ,ಸಮೂಹ ಮಾಧ್ಯಮಗಳಿಗೆ ಹಾಗೂ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಹಿತೈಷಿಗಳಿಗೂ ಹೃದಯಾಂತರಾಳದ ಕೃತಜ್ಞತೆಯನ್ನು ಅರ್ಪಿಸುತ್ತಾ ಮುಂದೆಯೂ ತಮ್ಮೆಲ್ಲರ ಸಲಹೆ ಸಹಕಾರಗಳನ್ನು ಅಪೇಕ್ಷಿಸುತ್ತಿದ್ದೇವೆ.

Join Whatsapp