ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಬೆಂಕಿಗಾಹುತಿ!

Prasthutha|

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಬೆಂಕಿಗೆ ಆಹುತಿಯಾಗಿದೆ. ಸುಮಾರು 30 ಪ್ರಯಾಣಿಕರಿದ್ದ ಬಸ್‌ಗೆ ಜಯನಗರದಲ್ಲಿ ಬೆಂಕಿ ತಗುಲಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

- Advertisement -

ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ ಜಯನಗರ ಮೆಟ್ರೋ ಸ್ಟೇಷನ್ ಹತ್ತಿರದಲ್ಲಿ ಬಿಎಂಟಿಸಿ ಬಸ್‌ಗೆ ಬೆಂಕಿ ತಗುಲಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

https://twitter.com/KarFireDept/status/1488427029628592128?cxt=HHwWgIDR8eqf-qcpAAAA

ಬ್ಯಾಟರಿ ವಿದ್ಯುತ್ ಸೋರಿಕೆಯಿಂದ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ.

- Advertisement -

15 ದಿನಗಳ ಹಿಂದೆ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಕೆ. ಆರ್. ಮಾರುಕಟ್ಟೆಗೆ ಸಂಚಾರ ನಡೆಸುತ್ತಿದ್ದ ದೀಪಾಂಜಲಿ ನಗರ ಡಿಪೋಗೆ ಸೇರಿದ ಬಸ್‌ಗೆ ಮಧ್ಯ ರಸ್ತೆಯಲ್ಲಿ ಬೆಂಕಿ ತಗುಲಿತ್ತು. ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದರು.

Join Whatsapp