ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

Prasthutha|

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.

- Advertisement -

ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.


ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ಬಸ್ ನ ನಿರ್ವಾಹಕ ತಿಳಿಸಿದ್ದಾರೆ. ಸ್ಥಳ್ಕಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಳಿಕ ಪೊಲೀಸರು ಉಂಟಾಗಿದ್ದ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.



Join Whatsapp