Home ಟಾಪ್ ಸುದ್ದಿಗಳು ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಬಿಎಂಟಿಸಿ ಕಂಡಕ್ಟರ್ ಅಮಾನತು

ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಬಿಎಂಟಿಸಿ ಕಂಡಕ್ಟರ್ ಅಮಾನತು

ಬೆಂಗಳೂರು: ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ನನ್ನು ಅಮಾನತು ಮಾಡಲಾಗಿದೆ.

ಬಿಎಂಟಿಸಿ ಬಸ್ ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರೊಬ್ಬರಿಗೆ ಟಿಕೆಟ್ ಪಡೆಯುವ / ನೀಡುವ ವಿಚಾರವಾಗಿ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಸಂದರ್ಭದಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರನ್ನು ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ಆಧಾರದಲ್ಲಿ ಕಂಡಕ್ಟರ್ ನನ್ನು ಅಮಾನತು ಮಾಡಲಾಗಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version