Home ಟಾಪ್ ಸುದ್ದಿಗಳು ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್ ಆತ್ಮಹತ್ಯೆ

ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್ ಆತ್ಮಹತ್ಯೆ

ಬೆಂಗಳೂರು: ಬಿಎಂಟಿಸಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.

ತಾಲೂಕಿನ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ.


ಇತ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್. ಕಳೆದ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೇಜರ್ ಕೊಠಡಿ ಎದುರೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗ್ಗೆ ಸಿಬ್ಬಂದಿಗಳು ನೋಡಿ, ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version