ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ

Prasthutha|

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕರ (ಗ್ರೇಡ್-3 ಮೇಲ್ವಿಚಾರಕರು) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 2,500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

- Advertisement -


BMTC ಮಿಕ್ಕುಳಿದ ವೃಂದದಲ್ಲಿ 2286 (ಆರ್ ಪಿಸಿ) ಹಾಗೂ ಸ್ಥಳೀಯ ವೃಂದ (ಹೈ–ಕ) 214 ಹುದ್ದೆಗಳಿದ್ದು ಒಟ್ಟಾರೆಯಾಗಿ ಮಹಿಳೆಯರಿಗೂ 825 ಹುದ್ದೆಗಳು ಮೀಸಲಿವೆ.
ಮಾರ್ಚ್ 10 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. cetonline.karnataka.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕು.


ಪಿಯುಸಿ, ಸಿಬಿಎಸ್ ಸಿ 10+2, ಮೂರು ವರ್ಷದ ಡಿಪ್ಲೋಮಾ ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ಅರ್ಹತೆ ಜೊತೆಗೆ ‘ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್’ ಅನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು.

Join Whatsapp