ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

Prasthutha|

ಬೆಂಗಳೂರು: ಬಿಎಂಟಿಸಿಯು 2024-25ನೇ ಸಾಲಿನ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ಗಳಿಗಾಗಿ ಇಂದಿನಿಂದ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತಿದೆ. ಜೂನ್ 1 ರಿಂದ ಬಸ್ ಪಾಸ್ಗಳನ್ನು ವಿತರಿಸಲು ಆರಂಭಿಸಲಿದೆ ಎಂದು ಬಿಎಂಟಿಸಿ ಹೇಳಿದೆ.

- Advertisement -

ಬಸ್ ಪಾಸ್ ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಒನ್ ಕೇಂದ್ರಗಳು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಮತ್ತು ಆನೇಕಲ್ ಬಸ್ ನಿಲ್ದಾಣದಲ್ಲಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6.30 ರವರೆಗೆ ಪಾಸ್ಗಳನ್ನು ನೀಡಲಾಗುತ್ತದೆ.
ಶಕ್ತಿ ಯೋಜನೆಯಡಿ, ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.



Join Whatsapp