ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್ ಚಂದ್ರಪ್ಪ ನೇಮಕ

Prasthutha|

ಬೆಂಗಳೂರು: ಮಾಜಿ ಸಂಸದ ಬಿಎನ್​​ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

- Advertisement -

ಆರ್​. ಧ್ರುವನಾರಯಣ್ ನಿಧನದಿಂದ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಬಿಎನ್ ಚಂದ್ರಪ್ಪ ಅವರನ್ನು ನೇಮಕ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಇಂದು(ಏಪ್ರಿಲ್ -09) ಆದೇಶ ಹೊರಡಿಸಿದ್ದಾರೆ.

1991 ರಿಂದ ಚಿಕ್ಕಮಗಳೂರು ಜಿಲ್ಲಾ ಪರಿಷತ್ ಸದಸ್ಯರಾಗುವ ಮೂಲಕ ಚಂದ್ರಪ್ಪ ಅವರು ತಮ್ಮ ರಾಜಕೀಯ ಜೀವನ ಆರಂಭಿಸಿದ್ದು, 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

Join Whatsapp