ನಿಗಮ ಮಂಡಳಿ | 36 ಶಾಸಕರು, 39 ಕಾರ್ಯಕರ್ತರಿಗೆ ಅವಕಾಶ: ಡಿಕೆಶಿ

Prasthutha|

ಬೆಂಗಳೂರು: “ಈ ಸೆಕೆಂಡ್ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗುತ್ತದೆ. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -


ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.



Join Whatsapp