ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ನಾಪತ್ತೆ

Prasthutha|

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ನಾಪತ್ತೆಯಾದ ಯುವಕರಾದ ಸಂದೀಪ್, ಕಾರ್ತಿಕ್ ಹಾಗೂ ರತೀಶ್ ಗಾಗಿ ಹುಡುಕಾಟ ಮುಂದುವರಿದಿದೆ. ದೋಣಿ ಮಗುಚಲು ಕಾರಣವೇನೆಂಬುದು ತಿಳಿದುಬಂದಿಲ್ಲ.



Join Whatsapp